ಕಲಬುರಗಿ : ಕಾಂಗ್ರೆಸ್ ಮುಖಂಡ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಗ ಪ್ರಿಯಾಂಕ್ ಖರ್ಗೆ ಅವರನ್ನು ಕೊಲೆ ಮಾಡಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಡಾ .ಶರಣ ಪ್ರಕಾಶ ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.
ಬಿಟ್ ಕಾಯಿನ್ ಹಗರಣ, ಪಿಎಸ್‌ಐ ನೇಮಕಾತಿ ಅಕ್ರಮ ಹಾಗೂ ಹಲವಾರು ಬಿಜೆಪಿಯ ಹಗರಣಗಳ ವಿರುದ್ಧ ರಾಜಿರಹಿತವಾಗಿ ಶಾಸಕ ಪ್ರಿಯಾಂಕ್ ಖರ್ಗೆ ಧ್ವನಿ ಎತ್ತುತ್ತಿದ್ದಾರೆ. ಆ ಕಾರಣಕ್ಕೆ ಇವರನ್ನು ಕೊಲೆ ಮಾಡಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ನಮಗೆ ಶೂಟ್ ಮಾಡಿದರೆ ತಮಗೂ ಶೂಟ್ ಮಾಡುವುದಾಗಿ ವಿವಾದತ್ಮಕ ಹೇಳಿಕ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರ ಹೇಳಿಕೆಯನ್ನು ಖಂಡಿಸಿ ಪತ್ರಿಕಾಗೋಷ್ಠಿಯೊಂದರಲ್ಲಿ ಈ ಬಗೆಯಲ್ಲಿ ಉತ್ತರಿಸಿದ್ದಾರೆ.
‘ಖರ್ಗೆ ಅವರನ್ನು ಶೂಟ್ ಮಾಡುವ ಬೆದರಿಕೆಯನ್ನು ಬಿಜೆಪಿ ಸರ್ಕಾರ ತಮ್ಮ ಮುಖಂಡರ ಮೂಲಕ ಹೇಳಿಕೆ ಕೊಡಿಸುತ್ತಿದೆ ಎಂದೂ ಕಿಡಿಕಾರಿದ್ದಾರೆ.
ಇದನ್ನೆಲ್ಲಾ ಗಮನವಹಿಸಿ ಸರಕಾರವು ಖರ್ಗೆ ಅವರಿಗೆ ಭದ್ರತೆ ಒದಗಿಸಬೇಕು. ಈ ಹಿಂದೆ ಹಲವು ಬಾರಿ ಹೇಳಿದರೂ ಸಮರ್ಪಕ ಭದ್ರತೆಯನ್ನು ನೀಡುವಲ್ಲಿ ಸರಕಾರ ವಿಫಲಗೊಂಡಿದೆ. ಜನಪ್ರತಿನಿಧಿಗಳಿಗೆ ಭದ್ರತೆ ನೀಡುವುದು ಸರಕಾರದ ಜವಾಬ್ದಾರಿ ಎಂದು ಅವರು ಹೇಳಿದ್ದಾರೆ.