ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ರಾಜಕೀಯಗೊಳಿಸಿದೆ: ರಾಹುಲ್ ಗಾಂಧಿ

Prasthutha|

ನಾಗಾಲ್ಯಾಂಡ್: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ಬಿಜೆಪಿ ಮತ್ತು ಆರ್ ಎಸ್ ಎಸ್ ಸೇರಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರಿತ ರಾಜಕೀಯ ಕಾರ್ಯಕ್ರಮವನ್ನಾಗಿಸಿದ್ದರಿಂದ, ಅದರಲ್ಲಿ ಪಾಲ್ಗೊಳ್ಳುವುದು ತಮ್ಮ ಪಕ್ಷದ ನಾಯಕರಿಗೆ ಕಷ್ಟದ ಕೆಲಸ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.

- Advertisement -


ಭಾರತ್ ಜೋಡೊ ನ್ಯಾಯ ಯಾತ್ರೆಯ ಭಾಗವಾಗಿ ನಾಗಾಲ್ಯಾಂಡ್ ಮೂಲಕ ಸಾಗಿದ ಜಾಥಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚುನಾವಣೆಯ ಸ್ಪರ್ಶ ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಮುಖ್ಯ ವಿರೋಧಿ ಪಕ್ಷವಾಗಿರುವ ಬಿಜೆಪಿ ಮತ್ತು ಸಂಘಟನೆಯಾದ ಆರ್ಎಸ್ಎಸ್ ಈ ಕಾರ್ಯಕ್ರಮವನ್ನು ತಮ್ಮ ಚುನಾವಣಾ ಲಾಭಕ್ಕಾಗಿ ರಾಜಕೀಯಗೊಳಿಸಿದ್ದರಿಂದ, ಅದರಲ್ಲಿ ನಮ್ಮ ಪಕ್ಷದ ನಾಯಕರು ಪಾಲ್ಗೊಳ್ಳಲು ಸಾಧ್ಯವಿಲ್ಲ’ ಎಂದಿದ್ದಾರೆ.

Join Whatsapp