Home ಟಾಪ್ ಸುದ್ದಿಗಳು ಮುಡಾ ವಿಚಾರದಲ್ಲಿ ಬಿಜೆಪಿ ರಾಜಕೀಯ: ಡಿಕೆ ಶಿವಕುಮಾರ್

ಮುಡಾ ವಿಚಾರದಲ್ಲಿ ಬಿಜೆಪಿ ರಾಜಕೀಯ: ಡಿಕೆ ಶಿವಕುಮಾರ್

ಬೆಂಗಳೂರು: ಮುಡಾ ವಿಚಾರದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ ಎಂದು ತಿಳಿಸಿದರು.


ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇ.ಡಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ವಾಲ್ಮೀಕಿ ನಿಗಮದ ಹಗರಣದ ಕುರಿತು ಎಸ್ ಐಟಿ ವಿಚಾರಣೆ ನಡೆಸುತ್ತಿದೆ. ಇ.ಡಿ ವಿಚಾರಣೆ ಅವಶ್ಯಕತೆ ಇರಲಿಲ್ಲ. ಅವರ ತನಿಖೆ ಬಗ್ಗೆ ತಿಳಿದು ನಂತರ ಮಾತನಾಡುತ್ತೇನೆ ಎಂದು ಹೇಳಿದರು.

Join Whatsapp
Exit mobile version