Home ಟಾಪ್ ಸುದ್ದಿಗಳು ಮುಖ್ಯಮಂತ್ರಿ ಮಗಳು ,ವಿಧಾನ ಪರಿಷತ್ ಸದಸ್ಯೆ ಕವಿತಾ ಕೊಲೆಯತ್ನ :ಬಿಜೆಪಿ ಅಧ್ಯಕ್ಷನ ಬಂಧನ

ಮುಖ್ಯಮಂತ್ರಿ ಮಗಳು ,ವಿಧಾನ ಪರಿಷತ್ ಸದಸ್ಯೆ ಕವಿತಾ ಕೊಲೆಯತ್ನ :ಬಿಜೆಪಿ ಅಧ್ಯಕ್ಷನ ಬಂಧನ

ತೆಲಂಗಾಣ: ತೆಲಂಗಾಣದ ವಿಧಾನ ಪರಿಷತ್ ಸದಸ್ಯೆ ಕವಿತಾ ಅವರ ಹತ್ಯೆಗೆ ಯತ್ನಿಸಿದ ಆರೋಪದಡಿ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ಮಂಗಳವಾರ ಕರೀಂನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿಯಲ್ಲಿನ ಅಬಕಾರಿ ನೀತಿಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಅದರ ವಿರುದ್ಧ ಬಿಜೆಪಿ ಯುವ ಮೋರ್ಚ ಮತ್ತು ಮಹಿಳಾ ಮೋರ್ಚ ಕಾರ್ಯಕರ್ತರು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಂಡಿ ಸಂಜಯ್ ಕುಮಾರ್ ಕವಿತಾರ ಕೊಲೆಯತ್ನವನ್ನು ನಡೆಸಿದ್ದಾರೆ ಎಂದು ಆರೋಪಿಸಿ ಅವರನ್ನು ಬಂಧಿಸಲಾಗಿದೆ,

ತನ್ನ ಮೇಲೆ ಕೊಲೆಯತ್ನ ಪ್ರಕರಣವನ್ನು ದಾಖಲಿಸಿದ್ದಕ್ಕಾಗಿ ಸ್ವತಃ ಶ್ರೀ ಸಂಜಯ್ ಕುಮಾರ್ ಅವರು ಟಿಆರ್ ಎಸ್ ಪೊಲೀಸರನ್ನು ಖಂಡಿಸಿದ್ದು, ಆರೋಪವನ್ನು ಅಲ್ಲಗಳೆದಿದ್ದಾರೆ ಮತ್ತು ಆಡಳಿತಾರೂಢ ಟಿಆರ್ಎಸ್ ಪಕ್ಷವು, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ

Join Whatsapp
Exit mobile version