ಬಿಜೆಪಿಯಿಂದ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ; ಅಂಕಿಅಂಶಗಳ ಬಹಿರಂಗಕ್ಕೆ ಖರ್ಗೆ ಆಗ್ರಹ

Prasthutha|

ನವದೆಹಲಿ: ಬಿಜೆಪಿ ಸರ್ಕಾರ ಪ್ರತಿವರ್ಷ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿದೆ. ಆದರೆ ಇದುವರೆಗೆ ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂಬುದರ ಬಗ್ಗೆ ಅಂಕಿಅಂಶಗಳನ್ನು ಬಹಿರಂಗಪಡಿಸುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

- Advertisement -

ರಾಜ್ಯಸಭೆಯಲ್ಲಿಂದು ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗ ಬಿಕ್ಕಟ್ಟನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

ಮಾತ್ರವಲ್ಲ ಕೇಂದ್ರ ಸರ್ಕಾರ ಸೃಷ್ಟಿಸಿರುವ ಉದ್ಯೋಗದ ಕುರಿತು ಅಂಕಿಅಂಶಗಳನ್ನು ಬಹಿರಂಗಪಡಿಸುವಂತೆ ಆಗ್ರಹಿಸಿದರು.

- Advertisement -

ಭಾರತ ಆರ್ಥಿಕತೆ ನೆಲಕಚ್ಚಿರುವುದನ್ನು ಮುಚ್ಚಿಟ್ಟುಕೊಂಡು ಭಾರತವನ್ನು ವಿಶ್ವದ ಅತ್ಯಂತ ವೇಗವಾಗಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ರಾಷ್ಟ್ರಪತಿಯವರ ಮೂಲಕ ಸರ್ಕಾರ ಸುಳ್ಳು ಹೇಳಿಕೆ ನೀಡಿದೆ ಎಂದು ದೂರಿದರು.

Join Whatsapp