ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ

Prasthutha|

ರಾಯಚೂರು: ಉಪ ರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಧ್ಯಕ್ಷ ಜಗದೀಪ್ ಧನಕರ್ ಅವರನ್ನು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಣಕಿಸಿದ್ದಾರೆ ಹಾಗೂ ಅದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಿತ್ರಿಕರಿಸಿದ್ದಾರೆ. ಇದು ಸರಿಯಲ್ಲ ಎಂದು ಪ್ರತಿಪಾದಿಸಿ ಶಾಸಕ ಡಾ.ಶಿವರಾಜ ಪಾಟೀಲ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ವಿರೋಧ ಪಕ್ಷದ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ಬಗ್ಗೆ ರಾಹುಲ್ ಗಾಂಧಿ ಹಾಗೂ ಕಲ್ಯಾಣ ಬ್ಯಾನರ್ಜಿ ಅವರು ಅಣಕಿಸಿ ಸಾರ್ವಜನಿಕವಾಗಿ ಅವಮಾನಿಸಿದ್ದಾರೆ. ದೇಶದ ಸರ್ವೋನ್ನತ ಹುದ್ದೆಯಲ್ಲಿರುವ ಅವರ ಅವಹೇಳನ ಸರಿಯಲ್ಲ. ಇಬ್ಬರ ವರ್ತನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನ ಹಾಗೂ ಅಗೌರವ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಮಾನಂದ ಯಾದವ, ಮುಖಂಡ ಎನ್.ಶಂಕ್ರಪ್ಪ, ಟಿ.ಶ್ರೀನಿವಾಸ, ನಾಗರಾಜ ಭಾಲ್ಕಿ, ವಿಷ್ಣುವರ್ಧನ, ನಾರಾಯಣರಾವ್ ಹಾಗೂ ಶಿವಕುಮಾರ ಪಾಲ್ಗೊಂಡಿದ್ದರು.



Join Whatsapp