Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದರು. ‘ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಿದು. ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.

Join Whatsapp
Exit mobile version