ನವದೆಹಲಿ: ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಎದುರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚದೇವ, ಘಟನೆ ಬಗ್ಗೆ ಸಿಎಂ ಅರವಿಂದ ಕೇಜ್ರಿವಾಲ್ ಅವರು ಮೌನ ವಹಿಸಿರುವುದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅವರು ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಜೊತೆ ‘ಅನುಚಿತವಾಗಿ’ ವರ್ತಿಸಿರುವುದು ನಿಜ. ಈ ಪ್ರಕರಣದಲ್ಲಿ ಪಕ್ಷ ಕಠಿಣ ಕ್ರಮ ಜರುಗಿಸಲಿದೆ ಎಂದು ಎಎಪಿ ತಿಳಿಸಿದೆ.
मुख्यमंत्री केजरीवाल के निवास में महिला सांसद से हुए अभद्र व्यवहार के खिलाफ विरोध प्रदर्शन। @alka_gurjar @Virend_Sachdeva https://t.co/9Nr3qgZiQ3
— BJP Delhi (@BJP4Delhi) May 15, 2024