‘ಬಿಜೆಪಿ ನನ್ನ ಗುರು’ ಎಂದ ರಾಹುಲ್ ಗಾಂಧಿ

Prasthutha|

- Advertisement -

ನವದೆಹಲಿ: ಬಿಜೆಪಿಯನ್ನು ನನ್ನ ಗುರು ಎಂದು ಪರಿಗಣಿಸುತ್ತೇನೆ, ಅವರು ನನಗೆ ದಾರಿ ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಮ್ಮ ಮೇಲೆ ಆಕ್ರಮಣಕಾರಿಯಾಗಿ ದಾಳಿ ಮಾಡಬೇಕೆಂದು ನಾನು ಬಯಸುತ್ತೇನೆ, ಇದು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಭಾರತ್ ಜೋಡೋ ಯಾತ್ರೆಯ ಬಾಗಿಲು ಎಲ್ಲರಿಗೂ ತೆರೆದಿದೆ, ನಮ್ಮೊಂದಿಗೆ ಸೇರುವುದನ್ನು ನಾವು ತಡೆಯುವುದಿಲ್ಲ ಎಂದರು.

- Advertisement -

ಇನ್ನು ಪ್ರತಿಪಕ್ಷಗಳು ದೂರದೃಷ್ಟಿಯೊಂದಿಗೆ ಸಮರ್ಥವಾಗಿ ನಿಂತರೆ ಚುನಾವಣೆಯಲ್ಲಿ ಗೆಲ್ಲುವುದು ಬಿಜೆಪಿಗೆ ತುಂಬಾ ಕಷ್ಟಕರವಾಗುತ್ತದೆ. ಆದರೆ ಪ್ರತಿಪಕ್ಷಗಳು ಸರಿಯಾಗಿ ಸಮನ್ವಯ ಸಾಧಿಸಬೇಕು ಮತ್ತು ಪ್ರತಿಪಕ್ಷಗಳು ಪರ್ಯಾಯ ದೃಷ್ಟಿಯೊಂದಿಗೆ ಜನರ ಬಳಿಗೆ ಹೋಗಬೇಕು ಎಂದು ಹೇಳಿದ್ದಾರೆ.

Join Whatsapp