ಪೂಂಚ್: ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶಾದ್ಯಂತ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಎಲ್ಲೇ ಹೋದರೂ ಜಾತಿ, ಧರ್ಮ, ರಾಜ್ಯ ಮತ್ತು ಭಾಷೆಗಳ ನಡುವೆ ಒಡಕು ಮೂಡಿಸಿ, ಸಂಘರ್ಷ ಹುಟ್ಟು ಹಾಕಲು ಯತ್ನಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಬಿಜೆಪಿಯು ಪಹಾರಿ ಮತ್ತು ಗುಜ್ಜರ್ ಸಮುದಾಯದ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸಿದೆ ಎಂದ ರಾಹುಲ್ ಗಾಂಧಿ ಬಿಜೆಪಿಯ ಈ ಯೋಜನೆ ವಿಫಲವಾಗಲಿದೆ ಎಂದು ಹೇಳಿದ್ದಾರೆ.
ದ್ವೇಷವನ್ನು ಪ್ರೀತಿಯಿಂದ ಮಾತ್ರ ಜಯಿಸಲು ಸಾಧ್ಯ. ಒಂದು ಕಡೆ ದ್ವೇಷವನ್ನು ಹರಡುವವರಿದ್ದಾರೆ ಮತ್ತು ಇನ್ನೊಂದು ಕಡೆ ಪ್ರೀತಿಯನ್ನು ಪ್ರಚಾರ ಮಾಡುವವರು ಇದ್ದಾರೆ. ಕಾಂಗ್ರೆಸ್ ಎಲ್ಲರನ್ನು ಒಟ್ಟುಗೂಡಿಸುವ ಮೂಲಕ ಮತ್ತು ಎಲ್ಲರಿಗೂ ಅವರ ಹಕ್ಕುಗಳನ್ನು ನೀಡುವ ಮೂಲಕ ಮುಂದೆ ಸಾಗುತ್ತಿದೆ. ಕಾಂಗ್ರೆಸ್ಗೆ ಎಲ್ಲರೂ ಸಮಾನರು. ನಾವು ಯಾರನ್ನೂ ಹಿಂದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.