ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮುಂದೆಯೇ ಸಚಿವ ಅಶ್ವಥ್ ನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ವೇದಿಕೆಯಲ್ಲಿ ಮಾತಿನ ಚಕಮಕಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರೌಡಿ ಡಿಕೆ ಬ್ರದರ್ಸ್ ಎಂದು ಟ್ವೀಟ್ ಮಾಡಿದೆ.
ತೋಳ್ಬಲ, ಅಕ್ರಮ ಸಂಪತ್ತಿನ ಬಲದಿಂದ ಮೆರೆಯುತ್ತಿರುವ ಕನಕಾಸುರರು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದ ಅಧಿಕಾರ ಹಿಡಿದು ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತಿದೆ. ಇವರು ಅಧಿಕಾರಕ್ಕೆ ಬಂದರೆ ಕಂಡ ಕಂಡ ಖಾಲಿ ಜಾಗಕ್ಕೆ ಬೇಲಿ ಹಾಕುವುದರಲ್ಲಿ ಅನುಮಾನವಿಲ್ಲ. ರಾಜ್ಯದ ಜನರು ಇಂಥವರಿಗೆ ಅಧಿಕಾರ ನೀಡಲಾರರು ಎಂದು ಡಿಕೆ ಬ್ರದರ್ಸ್ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ.