ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ: ಶರದ್ ಪವಾರ್ ಸ್ಪಷ್ಟನೆ

Prasthutha|

- Advertisement -

ಮುಂಬೈ: ಮಹಾರಾಷ್ಟ್ರದಲ್ಲಿ ನಮ್ಮ ಪಕ್ಷ ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ದೇವೇಂದ್ರ ಫಡ್ನವಿಸ್ ಅವರ ಹೇಳಿಕೆಯಿಂದ ನಮ್ಮ ಪಕ್ಷದ ಕಾರ್ಯಕರ್ತರು ಗೊಂದಲಕ್ಕೊಳಗಾಗಿದ್ದಾರೆ ಎಂದು ನನಗೆ ಅನಿಸುವುದಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಇಂದೇ ವಿಧಾನಸಭೆ ಚುನಾವಣೆ ನಡೆದರೂ ಎನ್‌ಸಿಪಿ, ಕಾಂಗ್ರೆಸ್, ಉದ್ಧವ್ ಠಾಕ್ರೆ ಅವರ ಶಿವಸೇನೆಯನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಸರ್ಕಾರವು ರಾಜ್ಯ ಸರ್ಕಾರವನ್ನು ರಚಿಸಲಿದೆ ಎಂದು ಶರದ್ ಪವಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Join Whatsapp