Home ಟಾಪ್ ಸುದ್ದಿಗಳು ಭಾರತ್ ಜೋಡೊ ಯಾತ್ರೆ ಕಂಡು ನಡುಗಿದ ಬಿಜೆಪಿ: ಸಿದ್ದರಾಮಯ್ಯ

ಭಾರತ್ ಜೋಡೊ ಯಾತ್ರೆ ಕಂಡು ನಡುಗಿದ ಬಿಜೆಪಿ: ಸಿದ್ದರಾಮಯ್ಯ

ಚಿತ್ರದುರ್ಗ: ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯನ್ನು ಕಂಡು ಬಿಜೆಪಿಗೆ ನಡುಕ ಶುರುವಾಗಿದೆ. ಬಿಜೆಪಿ ನಾಯಕರು ಭಯದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಲ್ಲಿ ಹೊಂದಾಣಿಕೆ ಇಲ್ಲ ಎಂಬುದು ಯಾರು ಹೇಳಿದ್ದು? ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಎಚ್.ವಿಶ್ವನಾಥ್ ಬಾಯಿಗೆ ಬಂದಂತೆ ಮಾತನಾಡುತ್ತಿರುವುದನ್ನು ನೋಡಿದರೆ ಎಲ್ಲ ಅರ್ಥವಾಗುತ್ತದೆ. ಯಡಿಯೂರಪ್ಪ ಅವರ ಹೊರತು ಬಿಜೆಪಿಯಲ್ಲಿ ಬೇರೆ ನಾಯಕರೇ ಇಲ್ಲ. ಅವರನ್ನು ಬಿಟ್ಟರೆ ಬಿಜೆಪಿ ಪ್ರಚಾರಕ್ಕೆ ಹೋಗಲು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.


ನನ್ನನ್ನು ಕಂಡರೆ ಬಿಜೆಪಿ ನಾಯಕರಿಗೆ ಭಯ. ಬಲಶಾಲಿಯಾದವರಿಗೆ ಶತ್ರುಗಳು ಹೆಚ್ಚು. ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಟ್ಟು ವಿಷಯಾಧಾರಿತ ಚರ್ಚೆಗೆ ಬನ್ನಿ. ವ್ಯಾಪಕವಾಗಿರುವ ಭಷ್ಟಾಚಾರದ ಕುರಿತು ಮಾತನಾಡಿ ಎಂದು ಹೇಳಿದರು.

Join Whatsapp
Exit mobile version