ಬಿಜೆಪಿಯವರು ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ: ಸಚಿವ ಈಶ್ವರ್ ಖಂಡ್ರೆ

Prasthutha|

ಕಲಬುರಗಿ: ಬಿಜೆಪಿಯವರು ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

- Advertisement -

 ‘ನಾನು ಕರಸೇವಕ ಅರೆಸ್ಟ್ ಮಾಡಿ ಎನ್ನುವ ಬಿಜೆಪಿ ಅಭಿಯಾನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು ‘ ಬಿಜೆಪಿಯವರು ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ. ಭಾವನಾತ್ಮಕವಾಗಿ ಜನರ ಕೆರಳಿಸಿ ಲಾಭ ಮಾಡಿಕೊಳ್ಳುವುದು ಬಿಜೆಪಿಯ ಗುಣ. ಜನ ಬಹಳಷ್ಟು ಜಾಗೃತರಾಗಿದ್ದಾರೆ, ಈ ರೀತಿಯ ವಿಷ ಬೀಜ ಬಿತ್ತುವ ಬಿಜೆಪಿಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Join Whatsapp