ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳ ಖಂಡಿಸಿ ಜೂನ್17ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

Prasthutha|

ಬೆಂಗಳೂರು: ರಾಜ್ಯ ಸರ್ಕಾರ ಮಾಡಿದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳವನ್ನು ಖಂಡಿಸಿ ರಾಜ್ಯಾದ್ಯಂತ ಜೂನ್.17ರಂದು ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ..

- Advertisement -

ಇದರಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಏರಿಕೆಯಾಗಲಿದೆ. ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಂತೆ ಆಗಲಿದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ‌ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಅಂದರೆ 4.1% ರಷ್ಟು ಏರಿಕೆ ಕಂಡಂತೆ ಆಗಿದೆ.

- Advertisement -

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಜೂನ್.17ರಂದು ರಾಜ್ಯಾಧ್ಯಂತ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸೋದಕ್ಕೆ ನಿರ್ಧಾರ ಕೈಗೊಂಡಿರೋದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.



Join Whatsapp