ಕೊಚ್ಚಿ: ಖ್ಯಾತ ಗಾಯಕಿ ಕೆ ಎಸ್ ಚಿತ್ರಾ ಬೆಂಬಲಕ್ಕೆ ಬಿಜೆಪಿ ನಿಂತಿದೆ. ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಬೆಂಬಲಿಸುವಂತೆ ಗಾಯಕಿ ಕರೆ ನೀಡಿರುವ ವಿಡಿಯೊಗೆ ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ.
ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಚಿತ್ರಾ ಅವರಿಗೆ ಬೆಂಬಲ ಸೂಚಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬೆಂಬಲ ನೀಡಿದ್ದು,, ಅಯೋಧ್ಯೆ ಪ್ರಾಣ ಪ್ರತಿಷ್ಠಾ ದಿನದಂದು ದೀಪ ಬೆಳಗಿಸುವಂತೆ ಮನವಿ ಮಾಡಿದ ಗಾಯಕಿ ಚಿತ್ರಾ ಅವರ ಮೇಲಿ ಎಡ-ಜಿಹಾದಿ ಗುಂಪುಗಳು ಸೈಬರ್ ದಾಳಿ ನಡೆಸಿವೆ. ಕೇರಳದಲ್ಲಿ ಪಿಣರಾಯಿ ವಿಜಯನ್ ಆಳ್ವಿಕೆಯಲ್ಲಿ ಒಬ್ಬ ಹಿಂದೂ ತನ್ನ ನಂಬಿಕೆಗಳನ್ನು ಸಹ ಅನುಯಾಯಿಗಳೊಂದಿಗೆ ಮುಕ್ತವಾಗಿ ಹಂಚಿಕೊಳ್ಳಲು ಸಾಧ್ಯವಿಲ್ಲ. ಈ ಕೃತ್ಯದ ಬಗ್ಗೆ ಕಾಂಗ್ರೆಸ್ ಮೌನವಾಗಿರುವುದು ನಾಚಿಕೆಗೇಡಿನ ಸಂಗತಿ. ನಾವು ಕೇರಳ ಬಿಜೆಪಿ ಕೆಎಸ್ ಚಿತ್ರಾ ಅವರ ಅಚಲ ಬೆಂಬಲಕ್ಕೆ ನಿಂತಿದ್ದೇವೆ ಎಂದು ಬರೆದಿದ್ದಾರೆ.
ಭಾನುವಾರ ಬಿಡುಗಡೆ ಮಾಡಿದ ವಿಡಿಯೊ ಸಂದೇಶದಲ್ಲಿ ಚಿತ್ರಾ, ಜನವರಿ 22 ರಂದು ಮಧ್ಯಾಹ್ನ 12:20 ಕ್ಕೆ ಸಮಾರಂಭದ ಸಮಯದಲ್ಲಿ “ಶ್ರೀ ರಾಮ, ಜಯ ರಾಮ, ಜಯ ಜಯ ರಾಮ” ಎಂದು ಜಪಿಸುವಂತೆ ಜನರನ್ನು ಒತ್ತಾಯಿಸಿದ್ದರು.