ಮತಾಂತರ, ಗೋ‌ ಹತ್ಯೆ ನಿಷೇಧ ಮಸೂದೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದೆ: ಈಶ್ವರಪ್ಪ

Prasthutha|

ಶಿವಮೊಗ್ಗ: ಮತಾಂತರ ಹಾಗೂ ಗೋ‌ ಹತ್ಯೆ ನಿಷೇಧ ಮಸೂದೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​. ಈಶ್ವರಪ್ಪ

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಹಾಗೂ ಗೋ ಹತ್ಯ ನಿಷೇಧ ಎರಡನ್ನು ಬಹಳ ಗಂಭೀರವಾಗಿ ಬಿಜೆಪಿ ತೆಗೆದುಕೊಂಡಿದೆ. ಹಿಂದೂ ಸಮಾಜವನ್ನು ರಕ್ಷಣೆ ಮಾಡಬೇಕಿರುವುದು ಸರ್ಕಾರದ ಕರ್ತವ್ಯವಾಗಿದೆ. ಈ ಸಂಬಂಧ ಅಗತ್ಯ ಇರುವ ಕಾನೂನುನ್ನು ಜಾರಿಗೆ ತರುತ್ತೇವೆ. ಯಾವುದೇ ಕಾರಣಕ್ಕೂ ಮತಾಂತರ ಆಗಲು ಬಿಡೋದಿಲ್ಲ ಎಂದು ಹೇಳಿದರು.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News



Join Whatsapp