ಪಂಜಾಬ್ ನಲ್ಲಿ ಅಮರಿಂದರ್, ಧಿಂಡ್ಸಾ ಅವರೊಂದಿಗೆ ಮೈತ್ರಿಗೆ ಸಿದ್ಧತೆ: ಅಮಿತ್ ಶಾ ಇಂಗಿತ

Prasthutha|

ನವದೆಹಲಿ: ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಅಕಾಲಿದಳದ ಮಾಜಿ ನಾಯಕ ಸುಖದೇವ್ ಸಿಂಗ್ ಧಿಂಡ್ಸಾ ಅವರ ಪಕ್ಷಗಳೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಇಂಗಿತ ವ್ಯಕ್ತಪಡಿಸಿದ್ದಾರೆ.

- Advertisement -

ಸದ್ಯ ಬಿಜೆಪಿ ಪಕ್ಷವು ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಅಕಾಲಿದಳದ ಮಾಜಿ ನಾಯಕ ಸುಖದೇವ್ ಸಿಂಗ್ ಧಿಂಡ್ಸಾ ಅವರೊಂದಿಗೆ ಈ ಸಂಬಂಧ ಚರ್ಚೆ ನಡೆಸಿದ್ದೇವೆ. ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಧಾನಿ ಈಗಾಗಲೇ ಪ್ರತಿಭಟನೆಯನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ ಎಂದು ತಿಳಿಸಿದರು.

Join Whatsapp