ನವದೆಹಲಿ: ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಅಕಾಲಿದಳದ ಮಾಜಿ ನಾಯಕ ಸುಖದೇವ್ ಸಿಂಗ್ ಧಿಂಡ್ಸಾ ಅವರ ಪಕ್ಷಗಳೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಇಂಗಿತ ವ್ಯಕ್ತಪಡಿಸಿದ್ದಾರೆ.
ಸದ್ಯ ಬಿಜೆಪಿ ಪಕ್ಷವು ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಅಕಾಲಿದಳದ ಮಾಜಿ ನಾಯಕ ಸುಖದೇವ್ ಸಿಂಗ್ ಧಿಂಡ್ಸಾ ಅವರೊಂದಿಗೆ ಈ ಸಂಬಂಧ ಚರ್ಚೆ ನಡೆಸಿದ್ದೇವೆ. ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಧಾನಿ ಈಗಾಗಲೇ ಪ್ರತಿಭಟನೆಯನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ ಎಂದು ತಿಳಿಸಿದರು.