ಅಸ್ಸಾಂ: ಅಸ್ಸಾಂನಲ್ಲಿ ಭಾರತ ಜೋಡೊ ನ್ಯಾಯ ಯಾತ್ರೆಯಲ್ಲಿ ಭಾಗವಹಿಸದಂತೆ ಜನರಿಗೆ ಬಿಜೆಪಿ ನೇತೃತ್ವದ ಸರ್ಕಾರವು ಬೆದರಿಕೆ ಹಾಕುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಸ್ವನಾಥ್ ಚರಿಯಾಲಿಯಲ್ಲಿ ಪ್ರಧಾನ ಕಛೇರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಬಿಜೆಪಿಯ ಬೆದರಿಕೆಗಳಿಗೆ ಜನರು ಹೆದರುವುದಿಲ್ಲ ಎಂದಿದ್ದಾರೆ.
ಯಾತ್ರೆ ಸಾಗುವ ಮಾರ್ಗಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನಿರಾಕರಿಸಲಾಗುತ್ತಿದೆ. ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್‌ನ ಧ್ವಜಗಳು ಮತ್ತು ಬ್ಯಾನರ್‌ಗಳನ್ನು ಹಾನಿಗೊಳಿಸಲಾಗುತ್ತಿದೆ’ ಎಂದು ರಾಹುಲ್ ಆರೋಪಿಸಿದರು.
‘ಅಸ್ಸಾಂ ಸರ್ಕಾರ ಜನರನ್ನು ಹತ್ತಿಕ್ಕಬಹುದು ಎಂದು ಭಾವಿಸಿದೆ. ಆದರೆ, ಇದು ರಾಹುಲ್ ಗಾಂಧಿಯವರ ಯಾತ್ರೆ ಅಲ್ಲ ಜನರ ಧ್ವನಿಗಾಗಿ ನಡೆಸುತ್ತಿರುವ ಯಾತ್ರೆ ಎಂದು ಅವರು ಅರ್ಥಮಾಡಿಕೊಳ್ಳುತ್ತಿಲ್ಲ. ರಾಹುಲ್ ಗಾಂಧಿ ಅಥವಾ ಅಸ್ಸಾಂನ ಜನರು ನಿಮಗೆ ಹೆದರುವುದಿಲ್ಲ. ನೀವು ಏನು ಬೇಕಾದರೂ ಮಾಡಬಹುದು. ಚುನಾವಣೆ ಬಂದಾಗ ಕಾಂಗ್ರೆಸ್ ಭಾರಿ ಅಂತರದಿಂದ ಬಿಜೆಪಿಯನ್ನು ಸೋಲಿಸುತ್ತದೆ ಎಂದು ರಾಹುಲ್ ಗುಡುಗಿದ್ದಾರೆ.
ಭಾರತ ಜೋಡೊ ನ್ಯಾಯ ಯಾತ್ರೆಯು ಇಂದು ಬೆಳಿಗ್ಗೆ ಅರುಣಾಚಲ ಪ್ರದೇಶದಿಂದ ಬಿಸ್ವನಾಥ್ ಮೂಲಕ ಅಸ್ಸಾಂಗೆ ಪ್ರವೇಶಿಸಿದೆ.