ಗೋವಾದಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಮಹಿಳಾ ಅಭ್ಯರ್ಥಿ ಸ್ಪರ್ಧೆ

Prasthutha|

ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಐದನೇ ಪಟ್ಟಿ ಸಾಕಷ್ಟು ಸದ್ದು ಮಾಡಿದೆ. ಗೋವಾದಲ್ಲಿ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಯೊಬ್ಬರು ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ. ಕೈಗಾರಿಕೋದ್ಯಮಿ ಪಲ್ಲವಿ ಡೆಂಪೊಗೆ ಟಿಕೆಟ್ ನೀಡಲಾಗಿದೆ.

- Advertisement -


ಗೋವಾದ ವಾಣಿಜ್ಯೋದ್ಯಮಿ ಹಾಗೂ ಶಿಕ್ಷಣತಜ್ಞೆಯೂ ಆಗಿರುವ ಪಲ್ಲವಿ ಡೆಂಪೊ ಅವರು ಪುಣೆಯ ಎಂಐಟಿಯಿಂದ ರಸಾಯನಶಾಸ್ತ್ರದಲ್ಲಿ ಪದವಿ ಮತ್ತು ವ್ಯವಹಾರ ನಿರ್ವಹಣೆಯಲ್ಲಿ (ಎಂಬಿಎ) ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸದ್ಯ 49 ವರ್ಷ ವಯಸ್ಸಿನ ಪಲ್ಲವಿ ಅವರು, ಡೆಂಪೊ ಇಂಡಸ್ಟ್ರೀಸ್ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಹಾಗೂ ಮಾಧ್ಯಮ ಮತ್ತು ರಿಯಲ್ ಎಸ್ಟೇಟ್ ವಿಭಾಗವನ್ನು ನಿರ್ವಹಣೆ ಮಾಡುತ್ತಿದ್ದಾರೆ. ದಕ್ಷಿಣ ಗೋವಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಫ್ರಾನ್ಸಿಸ್ಕೊ ಸರ್ದಿನ್ಹಾ ಪ್ರತಿನಿಧಿಸುತ್ತಿದ್ದಾರೆ.

1962 ರಿಂದ ಕಾಂಗ್ರೆಸ್ ಭದ್ರಕೋಟೆಯಾಗಿರುವ ಕ್ಷೇತ್ರದಲ್ಲಿ ಬಿಜೆಪಿ ಕೇವಲ ಎರಡು ಬಾರಿ (1999 ಮತ್ತು 2014 ರಲ್ಲಿ) ಗೆದ್ದಿದೆ. ಈ ಬಾರಿ ಪಲ್ಲವಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.



Join Whatsapp