ಲೋಕಸಭೆಗೆ ಶೀಘ್ರದಲ್ಲೇ ಬಿಜೆಪಿ ಆಕಾಂಕ್ಷಿಗಳ ಪಟ್ಟಿ: ಬಿ.ಎಸ್.ಯಡಿಯೂರಪ್ಪ

Prasthutha|

ಶಿವಮೊಗ್ಗ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿಯನ್ನು ಶೀಘ್ರದಲ್ಲೇ ತಯಾರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

- Advertisement -


ಇಂದು ಶಿವಮೊಗ್ಗದ ವಿನೋಬ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಶುರುವಾಗಿಲ್ಲ. ಆದಷ್ಟು ಬೇಗ ಸ್ಪರ್ಧಿಸುವ ಆಕಾಂಕ್ಷಿಗಳ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಕಳೆದ ಲೋಕಸಭೆ ಚುನಾವಣೆಯಂತೆ ಈ ಬಾರಿಯೂ 25ಕ್ಕೆ 25 ಕ್ಷೇತ್ರವನ್ನೂ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ” ಎಂದರು.

Join Whatsapp