ನವದೆಹಲಿ: ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮಾರ್ಚ್ 22 ರಂದು ಘೋಷಣೆಯಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆ.ಸಿ.ಮಾಧುಸ್ವಾಮಿ ಸಹಕಾರದಿಂದ ನಾವು ಚುನಾವಣೆ ಗೆಲ್ಲಬೇಕಿದೆ. ಕರಡಿ ಸಂಗಣ್ಣ ಜೊತೆಗೆ ಮಾತನಾಡಿದ್ದೇನೆ. ಅವರು ನಿಷ್ಠಾವಂತ ಮುಖಂಡರು. ಅವರು ಬೇರೆ ಯಾವ ನಿರ್ಧಾರ ತೆಗೆದುಕೊಳ್ಳಬಾರದು. ಮುಂದೆ ಅವರಿಗೆ ಸೂಕ್ತ ಸ್ಥಾನ ಮಾನ ನೀಡಲಾಗವುದು. ಅಸಮಾಧಾನಗೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಬೇಕು ಎಂದರು.
ಅಮಿತ್ ಶಾ, ಜೆ.ಪಿ ನಡ್ಡಾ ಅವರ ಜೊತೆ ಐದು ಕ್ಷೇತ್ರಗಳ ಬಗ್ಗೆ ಚರ್ಚಿಸಿದ್ದೇವೆ. ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸುತ್ತೇವೆ ಎಂದು ಹೇಳಿದರು.