ಮುಖ್ಯಮಂತ್ರಿ ತವರಲ್ಲಿ ಕಾಂಗ್ರೆಸ್ ಮುನ್ನಡೆ: ಸಿಂದಗಿಯಲ್ಲಿ ಬಿಜೆಪಿ ಓಟ

Prasthutha|

ಹಾವೇರಿ:  ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಮುಖ್ಯಮಂತ್ರಿ ತವರು ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಸಾಧಿಸಿದ್ದಾರೆ. ಐದು ಸುತ್ತಿನ ಮತ ಎಣಿಕೆಯ ಮುಕ್ತಾಯದ ಬಳಿಕ ಮಾನೆ ಅವರು 23,344 ಮತ ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರು 22,024 ಮತ ಪಡೆದಿದ್ದಾರೆ. ಜೆಡಿಎಸ್ ನ ನಿಯಾಜ್ ಶೇಖ್ ಕೇವಲ 204 ಮತಗಳನ್ನಷ್ಟೇ ಪಡೆದಿದ್ದಾರೆ.

- Advertisement -

ಸಿಂದಗಿ ಕ್ಷೇತ್ರದಲ್ಲಿ ಎಂಟು ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು 37021 ಮತಗಳನ್ನು ಪಡೆದು ಮುನ್ನುಗ್ಗುತ್ತಿದ್ದಾರೆ. ಕಾಂಗ್ರೆಸ್ ನ ಅಶೋಕ ಮನಗೂಳಿ 22342 ಮತ ಪಡೆದಿದ್ದಾರೆ. ಭೂಸನೂರ ಅವರು 14679 ಮತಗಳ ಮುನ್ನಡೆಯಲ್ಲಿದ್ದಾರೆ.

Join Whatsapp