ಮೇಕೆದಾಟು ಪಾದಯಾತ್ರೆಯನ್ನು ಕೊರೊನಾ ನೆಪದಲ್ಲಿ ತಡೆಯಲು ಬಿಜೆಪಿಯಿಂದ ಹುನ್ನಾರ: ಡಿಕೆಶಿ

Prasthutha: January 3, 2022

ಮೈಸೂರು: ಬಿಜೆಪಿ, ಕೊರೊನಾ ವಿಚಾರವನ್ನು ಮುಂದಿಟ್ಟುಕೊಂಡು ಮೇಕೆದಾಟು ಪಾದಯಾತ್ರೆಯನ್ನು ತಡೆಯಲು ಹುನ್ನಾರ ನಡೆಸುತ್ತಿದೆ. ನಮ್ಮನ್ನು ಜೈಲಿಗೆ ಕಳುಹಿಸಿದರೂ ಪರವಾಗಿಲ್ಲ ಪಾದಯಾತ್ರೆ ಮುಂದುವರಿಯಲಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

ಲಾಕ್‌ಡೌನ್‌ ಸೃಷ್ಟಿಸಲು ಯತ್ನಿಸುತ್ತಿದ್ಧಾರೆ. ಲಾಕ್‌ಡೌನ್‌ ಮಾಡಲಿ ಅಥವಾ ಬೇರೆ ಏನೂ ಮಾಡಲಿ ಆದರೆ, ಪಾದಯಾತ್ರೆ ಮಾತ್ರ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಕೊರೊನಾ ಇದ್ದರು ಸಿಎಂ ವಿವಾದಲ್ಲಿ ಪಾಲ್ಗೊಂಡು ಮಾರ್ಗಸೂಚಿಯನ್ನು ಉಲ್ಲಂಘಿಸಿಲ್ಲವೇ?. ಸಿಎಂ ವಿರುದ್ದ ಯಾವ ಕ್ರಮ ಕೈಗೊಳ್ಳಲಾಗಿದೆ” ಎಂದು ಕೇಳಿದ್ದಾರೆ.

“ನಾವು ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಪಾದಯಾತ್ರೆ ನಡೆಸುತ್ತೇವೆ. 1 ಲಕ್ಷ ಮಾಸ್ಕ್‌ ತರಿಸಲಿದ್ದೇವೆ. 10 ವೈದ್ಯಕೀಯ ತಂಡ ಇರಲಿದ್ದು, 100 ವೈದ್ಯರು ಭಾಗವಹಿಸುತ್ತಾರೆ” ಎಂದಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!