ರೇಪ್ ಕೇಸಿನಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಸಿಕ್ಕಿಹಾಕಿಕೊಂಡ ಬಿಜೆಪಿ ಕೊಳೆತು ನಾರುತ್ತಿದೆ: ಬೇಳೂರು ಗೋಪಾಲಕೃಷ್ಣ

Prasthutha|

ಶಿವಮೊಗ್ಗ: ರೇಪ್ ಕೇಸಿನಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಸಿಕ್ಕಿಹಾಕಿಕೊಂಡ ಬಿಜೆಪಿ ಕೊಳೆತು ನಾರುತ್ತಿದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಟೀಕಿಸಿದ್ದಾರೆ.

- Advertisement -

ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ನಮ್ಮ ರಾಷ್ಟ್ರೀಯ ನಾಯಕರ ಬಗ್ಗೆ ನಳಿನ್ ಕುಮಾರ್ ಕಟೀಲ್ ಹಗುರವಾಗಿ ಮಾತನಾಡಿ, ನಾಲಗೆಯನ್ನು ಹೊರಹಾಕಿದ್ದಾರೆ. ಇದನ್ನು ನಾನು ಖಂಡನೆ ಮಾಡುತ್ತೇನೆ, ವಿಧಾನಸೌಧದಲ್ಲಿ ಬ್ಲೂಫಿಲಂ ನೋಡಿದವರು ಬಿಜೆಪಿಯಲ್ಲಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಬಗ್ಗೆ ನಳಿನ್ ಕುಮಾರ್ ಕಟೀಲ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಬೇಳೂರು. ಅವರದೇ ಪಕ್ಷದ ನಾಯಕರೆನ್ನಿಸಿಕೊಂಡವರು, ವಿಧಾನಸಭೆಯಲ್ಲಿ ಬ್ಲೂ ಫಿಲಂ ನೋಡಿದ್ದಾರೆ. ಬಿಜೆಪಿಯಲ್ಲೇ ಅತ್ಯಾಚಾರಿಗಳಿದ್ದಾರೆ. ಅವರೇ ಹಲವು ಸ್ಕ್ಯಾಂಡಲ್‌ ಗಳಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇಂಥವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ. ಇವೆಲ್ಲದರ ಬಗ್ಗೆ ಗೊತ್ತಿರುವ ಕಟೀಲು, ನಮ್ಮ ಕೇಂದ್ರ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ. ಒಬ್ಬ ರಾಜ್ಯಾಧ್ಯಕ್ಷನಾಗಿ ಅವರ ಹೇಳಿಕೆ ಸರಿಯಲ್ಲ ಎಂದು ಕಿಡಿಕಾರಿದರು‌.

Join Whatsapp