ಕರೀಮ್ ನಗರ: ತೆಲಂಗಾಣದಲ್ಲಿ ಆಡಳಿತಾರೂಢ ಟಿ.ಆರ್.ಎಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಈ ಎರಡೂ ಪಕ್ಷಗಳು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ ಮತ್ತು ನಗದು ರಾಜಕೀಯದಲ್ಲಿ ತೊಡಗಿವೆ ಎಂದು ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ಪ್ರಯುಕ್ತ ನಾಲ್ಕು ದಿನಗಳ ವಿರಾಮದ ಬಳಿಕ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ಎಲ್ಲಾ ಮಸೂದೆಗಳನ್ನು ಟಿ.ಆರ್.ಎಸ್ ಬೆಂಬಲಿಸುತ್ತದೆ ಎಂದು ತಿಳಿಸಿದರು. ನಾರಾಯಣಪೇಟೆ ಜಿಲ್ಲೆಯ ಗುನ್’ಮುಕ್ಲಾ ಮರಿಕಲ್’ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾಯ್ದೆಗಳನ್ನು ಟಿ.ಆರ್.ಎಸ್ ಬೆಂಬಲಿಸಿತ್ತು ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷವು ವಿಧಾನಸಭೆಯಲ್ಲಿ ಜನವಿರೂಧಿ ಕಾನೂನಿನ ವಿರುದ್ಧ ನಿರ್ಣಯವನ್ನು ತೆಗೆದರೆ, ಟಿ.ಆರ್.ಎಸ್. ಅದಕ್ಕೆ ಬೆಂಬಲ ಸೂಚಿಸಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿ ಮತ್ತು ಟಿ.ಆರ್.ಎಸ್ ಒಂದೇ ನಾಣ್ಯದ ಎರಡು ಮುಖಗಳು ಎಂದು ನಾನು ಇಲ್ಲಿ ಹೇಳಲು ಬಯಸುತ್ತೇನೆ ಎಂದು ತಿಳಿಸಿದರು. ಅವರು ಒಟ್ಟಾಗಿ ಕೆಲಸ ಮಾಡುತ್ತಾರೆ. ನೀವು ಇದನ್ನು ಅರ್ಥಮಾಡಿಕೊಳ್ಳಬೇಕು. ಅವರು ಪರಸ್ಪರ ಬೆಂಬಲಿಸುತ್ತಾರೆ. ದೆಹಲಿಯಲ್ಲಿ ಟಿಆರ್‌ಎಸ್ ಅವರನ್ನು ಬೆಂಬಲಿಸುತ್ತದೆ ಮತ್ತು ತೆಲಂಗಾಣದಲ್ಲಿ ಬಿಜೆಪಿ ಈ ಟಿಆರ್‌ಎಸ್ ಅನ್ನು ಬೆಂಬಲಿಸುತ್ತದೆ ಎಂದು ತಿಳಿಸಿದರು.