Home ಟಾಪ್ ಸುದ್ದಿಗಳು ಧಾರ್ಮಿಕ ವಿಚಾರಗಳನ್ನು ಮುಂದಿಟ್ಟು ಅಧಿಕಾರಕ್ಕೆ ಯತ್ನಿಸುವ ಬಿಜೆಪಿ: ಮುಖ್ಯಮಂತ್ರಿ ಚಂದ್ರು

ಧಾರ್ಮಿಕ ವಿಚಾರಗಳನ್ನು ಮುಂದಿಟ್ಟು ಅಧಿಕಾರಕ್ಕೆ ಯತ್ನಿಸುವ ಬಿಜೆಪಿ: ಮುಖ್ಯಮಂತ್ರಿ ಚಂದ್ರು

ಯಾದಗಿರಿ: ಕೇವಲ ಧಾರ್ಮಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಒಲವು ಗಳಿಸಿ ಅಧಿಕಾರಕ್ಕೆ ಬಿಜೆಪಿಗರು ಯತ್ನಿಸುತ್ತಿದ್ದಾರೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಸಮಾಧಾನ‌ ವ್ಯಕ್ತಪಡಿಸಿದ್ದಾರೆ.

ಕಳೆದ 10 ವರ್ಷಗಳಲ್ಲಿ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ರೈತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ, ಅವರು ಕಾರ್ಪೊರೇಟ್ ವಲಯದ ಪರ ಕೆಲಸ ಮಾಡುತ್ತಿದೆ.ಬರುವ ಲೋಕಸಭಾ ಚುನಾವಣೆ ಪೂರ್ವದಿಂದಲೇ ಅವರು ದೇಶದ ಜನರಲ್ಲಿ ತಮ್ಮ ಅಧಿಕಾರವಧಿಯ ಸಾಧನೆಗಳನ್ನು ಪ್ರಸ್ತಾಪಿಸದೇ ಕೇವಲ ಧಾರ್ಮಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಯತ್ನಿಸುತ್ತಿದೆ ಎಂದು ಕಿಡಿಗಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಯಾಯಿತು. ನಾವು ಅದನ್ನು ಸ್ವಾಗತಿಸುತ್ತೇವೆ. ಶ್ರೀರಾಮನನ್ನು ಇಡೀ ದೇಶದ ಜನರು ಪೂಜಿಸುತ್ತಾರೆ. ಆದರೆ ಈ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡಿ, ಲಾಭ ಮಾಡಿಕೊಳ್ಳಲು ಯತ್ನಿಸಿದ ರೀತಿಯನ್ನು ನಾವು ಖಂಡಿಸುತ್ತೇವೆ ಎಂದರು.

ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ವಾಧಿಕಾರಿ ದೋರಣೆ ಆಡಳಿತ ನೀಡಲು ಯತ್ನಿಸುತ್ತಿದ್ದಾರೆ. ಅದು ಒಳ್ಳೆಯದಲ್ಲ. ದೇಶದ ಇತರ ರಾಜ್ಯಗಳಲ್ಲಿ ಜನರಿಗೆ ಉತ್ತಮ ಆಡಳಿತ ನೀಡುತ್ತಿರುವ ಪ್ರಾದೇಶಿಕ ಪಕ್ಷಗಳ ಅಸ್ತಿತ್ವವನ್ನು ನಾಶ ಮಾಡುತ್ತಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ ಎಂದು ಟೀಕಿಸಿದರು

Join Whatsapp
Exit mobile version