ಹೊಸದಿಲ್ಲಿ: ಹರ್ಯಾಣ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಬಿಜೆಪಿ ಉಪಾಧ್ಯಕ್ಷ ಜಿಎಲ್ ಶರ್ಮಾ ಅವರು ರವಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಅವರೊಂದಿಗೆ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು 250 ಕ್ಕೂ ಹೆಚ್ಚು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದರು ಎಂದು ಕಾಂಗ್ರೆಸ್ ತಿಳಿಸಿದೆ.
ಜಿ ಎಲ್ ಶರ್ಮಾ ಅವರು ಹರಿಯಾಣ ಸರ್ಕಾರದಲ್ಲಿ ಡೈರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು. ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರು ಪಕ್ಷ ಸೇರಿದ ಜಿಎಲ್ ಶರ್ಮಾ ಅವರನ್ನು ಅಭಿನಂದಿಸಿದರು.
ಎಲ್ಲಾ ಸಮುದಾಯಗಳ ಅಭಿವೃದ್ದಿಯ ಧ್ಯೇಯ ಹೊಂದಿದರುವ ದೇಶದ ಏಕೈಕ ಪಕ್ಷ ಕಾಂಗ್ರೆಸ್. ಪಕ್ಷವು ಉದ್ಯೋಗ, ಅಭಿವೃದ್ಧಿ, ಕ್ರೀಡೆ ಮತ್ತು ಬಂಡವಾಳ ಹೂಡಿಕೆಯಲ್ಲಿ ರಾಜ್ಯವನ್ನು ಮತ್ತೆ ಮೊದಲ ಸ್ಥಾನಕ್ಕೆ ತರಲಿದೆ ಎಂದರು.