Home ಟಾಪ್ ಸುದ್ದಿಗಳು ಬಿಜೆಪಿಗೆ ಮತ ಹಾಕಿದರೆ ರಾಮನಿಗೆ ನೀಡಿದಂತೆ: ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ

ಬಿಜೆಪಿಗೆ ಮತ ಹಾಕಿದರೆ ರಾಮನಿಗೆ ನೀಡಿದಂತೆ: ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ

ಕಾರವಾರ: ಬಿಜೆಪಿಗೆ ನೀವು ಮತ ಹಾಕಿದರೆ ಅದು ರಾಮನಿಗೆ ಹಾಗೂ ಪ್ರಧಾನಿ ಮೋದಿಗೆ ಮತ ಹಾಕಿದಂತೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯರ್ತರಿಗೆ ಕರೆ ನೀಡಿದ್ದಾರೆ.

ಶಿರಸಿ ನಗರದ ಕಚೇರಿಯಲ್ಲಿ ಮಾತನಾಡಿದ ಅವರು, ಕೆನರಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುದನ್ನು ವರಿಷ್ಠರು ಸೂಕ್ತ ಸಮಯದಲ್ಲಿ ಘೋಷಣೆ ಮಾಡುತ್ತಾರೆ. ಕಳೆದ ಬಾರಿಗಿಂತಲೂ ದಾಖಲೆ ಮತಗಳಿಂದ ಈ ಬಾರಿ ನಮ್ಮ ಬಿಜೆಪಿ ಗೆಲ್ಲಲಿದೆ. ಕಳೆದ ಬಾರಿ 4 ಲಕ್ಷ 80 ಸಾವಿರ ಮತಗಳ ಅಂತರದಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ ಆ ದಾಖಲೆಯನ್ನು ಮುರಿದು ಇನ್ನೊಂದು ದಾಖಲೆಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ನಮ್ಮ ಕಾರ್ಯಕರ್ತರು ಹಾಗೂ ಮತದಾರರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿಗೆ ಮತ ಹಾಕಿದ್ರೆ ಅದು ರಾಮನಿಗೆ ಮತ ನೀಡಿದಂತೆ. ಬಿಜೆಪಿಗೆ ಮತ ಚಲಾಯಿಸಿದರೆ ಅದು ನರೇಂದ್ರ ಮೋದಿಗೆ ಮತ ಹಾಕಿದಂತೆ. ಜತೆಗೆ, ದೇಶದ ಐಕ್ಯತೆಗೆ ಮತ ನೀಡಿದಂತೆ ಎಂದರು.

Join Whatsapp
Exit mobile version