ಸುರತ್ಕಲ್ ಟೋಲ್ ಗೇಟನ್ನು ಮೊದಲು ವಿರೋಧಿಸಿದ್ದು ಬಿಜೆಪಿ: ನಳಿನ್ ಕುಮಾರ್ ಕಟೀಲ್

Prasthutha|

ಮಂಗಳೂರು: ನಗರದ ಸುರತ್ಕಲ್‌ನಲ್ಲಿ ಅಕ್ರಮ ಎಂದು ಹೇಳಲಾಗುತ್ತಿರುವ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಸುರತ್ಕಲ್ ಟೋಲ್ ಗೇಟ್ ಸ್ಥಾಪನೆಗೆ ಮೊದಲು ವಿರೋಧ ವ್ಯಕ್ತಪಡಿಸಿದ್ದು ಬಿಜೆಪಿಯೇ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

- Advertisement -

ಮಂಗಳವಾರ ನಡೆದ ಬೃಹತ್ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ನಳಿನ್, ಸುರತ್ಕಲ್ ಟೋಲ್ ಗೇಟ್ ತೆರವಿಗೆ ಯಾವುದೇ ತೊಂದರೆ ಇಲ್ಲ, ಟೋಲ್ ಗೇಟ್ ಸ್ಥಾಪನೆಯಾದಾಗ ಮೊದಲು ನಮ್ಮ ಪಕ್ಷವೇ ವಿರೋಧ ವ್ಯಕ್ತಪಡಿಸಿದ್ದು, ತಾಂತ್ರಿಕ ಸಮಸ್ಯೆಯಿಂದ ಟೋಲ್ ಗೇಟ್ ತೆಗೆಯಲು ವಿಳಂಬವಾಗಿದೆ, ನಾವು 20 ದಿನಗಳ ಕಾಲಾವಕಾಶ ಕೇಳಿದ್ದೇವೆ, ಆದರೆ ಕಾನೂನನ್ನು ಕೈಗೆ ತೆಗೆದುಕೊಂಡು ಇಂತಹ ಪ್ರತಿಭಟನೆಗಳನ್ನು ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದರು.

ಇನ್ನು ಸುರತ್ಕಲ್ ಟೋಲ್ ಗೇಟ್ ತೆರವು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿದ್ದೇನೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಟೋಲ್ ಗೇಟ್ ತೆಗೆದುಹಾಕುವುದಾಗಿ ಲೋಕಸಭೆಯ ಸದಸ್ಯರಿಗೆ ಭರವಸೆ ನೀಡಿದ್ದಾರೆ ಎಂದರು.ಪ್ರತಿಭಟನಾಕಾರರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದ್ದಿದ್ದಾರೆ.

Join Whatsapp