ಗುಜರಾತ್ ನಲ್ಲಿ ಹಿಂದೆಂದೂ ಕಾಣದ ರೀತಿ ಬಿಜೆಪಿಯು ಗೆಲುವನ್ನು ಸಾಧಿಸಲಿದೆ : ಅಮಿತ್ ಶಾ

Prasthutha|

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ದಾಖಲೆಯನ್ನು ಮುರಿದು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -

ಸನಂದ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕನುಭಾಯ್‌ ಪಟೇಲ್ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಮಿತ್ ಶಾ ಸುದ್ದಿಗಾರರೊಂದಿಗೆ ಈ ಬಗೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಗುಜರಾತ್ ನಲ್ಲಿ ಮಾಡಿದ್ದಾರೆ. ಈ ಬಾರಿ ಜನತೆ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸುತ್ತಾರೆ ಎಂದು ಅವರು ಹೇಳಿದ್ದಾರೆ.

Join Whatsapp