ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ಸಿಎಂ ಸಿದ್ದರಾಮಯ್ಯ ಭವಿಷ್ಯ

- Advertisement -

- Advertisement -

ಬೆಂಗಳೂರು: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಸಂಬಂಧ ಪ್ರತಿಪಕ್ಷಗಳ ಆಕ್ಷೇಪಕ್ಕೆ ಸಮಗ್ರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ಉತ್ತರಿಸಿದರು.

ಸದಸ್ಯರ ಟೀಕೆಗಳು, ಸಲಹೆ ಸೂಚನೆಗಳನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿದಾರಿ ತೋರಲು ಟೀಕೆಗಳು ಇರಬೇಕು. ಇತ್ತೀಚೆಗೆ ಹೆಚ್ಚು ವಿದ್ಯಾವಂತರು, ವಿಚಾರವಂತರು ಕೆಳಮನೆ ಹಾಗೂ ಮೇಲ್ಮನೆಗೂ ಬರುತ್ತಿರುವುದರಿಂದ, ಚರ್ಚೆಗಳ ಮಟ್ಟ ಎತ್ತರಕ್ಕೆ ಹೋಗಬೇಕೇ ವಿನ: ಗುಣಮಟ್ಟ ಇಳಿಯಬಾರದು ಎಂದು ಆಶಿಸಿದರು.

- Advertisement -

ಚುನಾವಣೆ ಪೂರ್ವದಲ್ಲಿ 2022 ರಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದೆವು. 2023ರಲ್ಲಿ ಜೂನ್ 11 ರಲ್ಲಿ ಶಕ್ತಿ ಯೋಜನೆಯನ್ನು ವಿಧಾನಸೌಧದಲ್ಲಿ, ಜುಲೈ ತಿಂಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿಗಳನ್ನು ಜಾರಿ ಮಾಡಲಾಯಿತು. ಆಗಸ್ಟ್ 1 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿಯನ್ನು ಜಾರಿ ಮಾಡಲಾಯಿತು. ಡಿಸೆಂಬರ್​ನಲ್ಲಿ ಶಿವಮೊಗ್ಗದಲ್ಲಿ ಯುವನಿಧಿಯನ್ನು ಪ್ರಾರಂಭಿಸಲಾಯಿತು. ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷದ ಒಳಗೆಯೇ ಜಾರಿ ಮಾಡಲಾಯಿತು. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಪ್ರತಿಪಾದಿಸಿದರು.

ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ ಬಿಜೆಪಿಯವರು ಸುಳ್ಳು ಎಂದು ಟೀಕಿಸಿದರು. ಗ್ಯಾರಂಟಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ‘ಮೋದಿ ಕಿ ಗ್ಯಾರಂಟಿ’ ಎಂದು ಘೋಷಿಸಿದರು. ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು ಚುನಾವಣೆಯನ್ನು ಎದುರಿಸಿದರು. ಆದರೆ, ಈ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ಸ್ಥಾನವನ್ನು ಪಡೆದಿದ್ದಾರೆ. ರಾಜ್ಯದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ನಾವು ಕಳೆದ ಬಾರಿ ಕಾಂಗ್ರೆಸ್ ಕಮ್ಮಿ ಗೆದ್ದಿದ್ದರೂ, ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

- Advertisement -


Must Read

Related Articles