ಲಕ್ನೋ: ಭಾರತದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಉತ್ತರ ಪ್ರದೇಶದ ಚುನಾವಣೆ ನಡೆಯುತ್ತಿದ್ದು, ಬಿಜೆಪಿಗೆ ಹೀನಾಯ ಸೋಲಾಗಲಿದೆ ಎಂದು ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ತಿಳಿಸಿದ್ದಾರೆ.
ಜಾಮಿಯಾ ಮಿಲಿಯಾ ಇಸ್ಲಾಮಿಕ್ ವಿಶ್ವವಿದ್ಯಾನಿಲಯದ ಉಪಕುಲಪತಿಯೂ ಆಗಿರುವ ನಜೀಬ್ ಜಂಗ್ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಲಿದೆ ಮತ್ತು ಅಖಿಲೇಶ್ ಯಾದವ್ ಅವರ ಪಕ್ಷ ಸಮಾಜವಾದಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ರೈತರ ಪ್ರತಿಭಟನೆಯು ಮತದಾರರ ಮೇಲೆ ಪರಿಣಾಮ ಬೀರಿದ್ದು, ವಿಶೇಷವಾಗಿ ಉತ್ತರ ಪ್ರದೇಶದ ಪಶ್ಚಿಮ ಭಾಗ, ಜಂಗ್ ನಲ್ಲಿ ಬಿಜೆಪಿ ನೆಲಕಚ್ಚಲಿದೆ ಎಂದು ತಿಳಿಸಿದರು.