ಜೆಡಿಎಸ್ ಜೊತೆ ಹೊಂದಾಣಿಕೆಯಿಂದ ಬಿಜೆಪಿಗೆ ನಷ್ಟ: ವೀರಪ್ಪ ಮೊಯ್ಲಿ

Prasthutha|

ಮಂಗಳೂರು: ಜೆಡಿಎಸ್ ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದರಿಂದ ನಷ್ಟ ಉಂಟಾಗುತ್ತದೆ ಹೊರತು ಬಿಜೆಪಿ ಲಾಭವಾಗುವುದಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

- Advertisement -


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯಿತು ಎಂದು ಅರ್ಥ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದರು.


ನಾನು ಈ ಬಾರಿಯೂ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡುತ್ತೇನೆ. ಬಿ.ಕೆ.ಹರಿಪ್ರಸಾದ್ ವಿಚಾರ ಶಿಸ್ತು ಕಮಿಟಿ ಮುಂದೆ ಇದೆ. ಅವರಿಗೆ ನೊಟೀಸ್ ಕೊಟ್ಟು ಇದರ ಬಗ್ಗೆ ಸಮಿತಿ ನೋಡಿಕೊಳ್ಳುತ್ತದೆ ಎಂದರು.

Join Whatsapp