ಬಿಜೆಪಿ ಸೇರ್ಪಡೆ ಆಗುವುದಿಲ್ಲ: ಜನಾರ್ದನ ರೆಡ್ಡಿ

Prasthutha|

ಬೆಙಗಳೂರು: ಮಾಜಿ ಸಚಿವ, ಕೆಆರ್ ಪಿಪಿ ಪಕ್ಷದ ಸ್ಥಾಪಕ, ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಬಿಜೆಪಿಗೆ ಮರು ಸೇರ್ಪಡೆ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಸದ್ಯಕ್ಕೆ ಬಿಜೆಪಿಗೆ ಸೇರ್ಪಡೆಯಾಗುವುಲ್ಲ ಎಂದು ಜನಾರ್ದನ ರೆಡ್ಡಿ ತಿಳಿಸಿದ್ದಾರೆ ಎನ್ನಲಾಗಿದೆ.

- Advertisement -

ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಕೆಆರ್‌ಪಿಪಿ ಪದಾಧಿಕಾರಿಗಳ ಸಭೆ ನಡೆಸಿದ ರೆಡ್ಡಿ, ಬಿಜೆಪಿ ಜೊತೆ ಸದ್ಯಕ್ಕೆ ಸೇರ್ಪಡೆ ಇಲ್ಲ. ಆದರೆ ಹೊಂದಾಣಿಕೆ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ. ಪಕ್ಷದ ಪದಾಧಿಕಾರಿಗಳು ಕೂಡ ಹೊಂದಾಣಿಕೆಗೆ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಮೊನ್ನೆಯಷ್ಟೇ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದಿದ್ದ ಪಾದಯಾತ್ರೆ ಹಾಗೂ ಪ್ರತಿಭಟನೆಯಲ್ಲಿಯೂ ಜನಾರ್ಧನ ರೆಡ್ಡಿ ಭಾಗಿಯಾಗಿದ್ದರು. ಅಲ್ಲದೇ ಬಿಜೆಪಿ ಜೊತೆ ಮೈತ್ರಿಗೆ ಸಿದ್ಧ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.

- Advertisement -

ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿಯಿಂದಲೂ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿತ್ತು. ಇದೀಗ ಕೆಆರ್ ಪಿಪಿ ಸಭೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಗೆ ನಿರ್ಧರಿಸಲಾಗಿದ್ದು, ಪಕ್ಷ ಸೇರ್ಪಡೆ ಇಲ್ಲ ಎಂಬುದು ಸ್ಪಷ್ಟವಾಗಿದೆ.

Join Whatsapp