Home ಟಾಪ್ ಸುದ್ದಿಗಳು ಕಾರ್ಯಕರ್ತರು ರಾಜೀನಾಮೆ ನೀಡಿದರೆ ಬಿಜೆಪಿಗೇನು ನಷ್ಟ ಇಲ್ಲ: ಈಶ್ವರಪ್ಪ

ಕಾರ್ಯಕರ್ತರು ರಾಜೀನಾಮೆ ನೀಡಿದರೆ ಬಿಜೆಪಿಗೇನು ನಷ್ಟ ಇಲ್ಲ: ಈಶ್ವರಪ್ಪ

ಶಿವಮೊಗ್ಗ: ಕಾರ್ಯಕರ್ತರು ರಾಜೀನಾಮೆ ನೀಡಿದರೆ ಬಿಜೆಪಿಗೇನು ನಷ್ಟ ಇಲ್ಲ. ಅವರು ರಾಜೀನಾಮೆ ನೀಡಿದರೆ ಹೊಸಬರು ಬರ್ತಾರೆ, ಬಿಜೆಪಿಗೇನು ಕಾರ್ಯಕರ್ತರು ಸಿಗುವುದಿಲ್ಲವೇ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಬಳಿಕ ಬಿಜೆಪಿಯ ಅನೇಕ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಹುಡುಗರಿಗೆ ಪ್ರಬುಧ್ದತೆ ಕಡಿಮೆ ಇದೆ. ಯುವ ಕಾರ್ಯಕರ್ತರು ರಾಜೀನಾಮೆ ಕೊಟ್ಟರು ಎಂದಾಕ್ಷಣ ಅವರ ರಾಜೀನಾಮೆ ಅಂಗೀಕಾರ ಮಾಡಿ ಮನೆಗೆ ಕಳುಹಿಸುವುದು ಕೇವಲ ಐದು ನಿಮಿಷದ ಕೆಲಸ. ಆದರೆ ಅವರಿಗೆ ಸಮಾಧಾನ ಮಾಡುತ್ತೇವೆ. ಬದಲಾಗುತ್ತಾರೆ ಎಂಬ ನಂಬಿಕೆ ನಮಗಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version