ಮಂಗಳೂರು: ಜೆಡಿಎಸ್ ಕೂಡ ಎನ್ ಡಿಎ ಜೊತೆಯಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಲಿದೆ. ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡದ್ದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ ವಿ ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಅನೀರಿಕ್ಷಿತ ಹಿನ್ನಡೆಯಾಗಿದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಒಂಬತ್ತುವರೆ ವರ್ಷದ ಆಡಳಿತ ಅತ್ಯಂತ ಯಶಸ್ವಿಯಾಗಿದೆ. ಅವರಿಂದ ಅಭಿವೃದ್ಧಿಗೆ ಅರ್ಥ ಬಂದಿದೆ” ಎಂದರು.