Home ಟಾಪ್ ಸುದ್ದಿಗಳು ಬಿಜೆಪಿ 150ರ ಗಡಿ ದಾಟುವುದಿಲ್ಲ: ರಾಹುಲ್ ಗಾಂಧಿ

ಬಿಜೆಪಿ 150ರ ಗಡಿ ದಾಟುವುದಿಲ್ಲ: ರಾಹುಲ್ ಗಾಂಧಿ

ಗಾಜಿಯಾಬಾದ್ : ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷ ಎಷ್ಟು ಸ್ಥಾನ ಗೆಲ್ಲಬಹುದು ಎಂಬ ಬಗ್ಗೆ ಈಗಲೇ ಹೇಳಲು ಬರುವುದಿಲ್ಲ. ಹದಿನೈದು ದಿನಗಳ ಹಿಂದೆ ಬಿಜೆಪಿ ಸುಮಾರು 180 ಸ್ಥಾನಗಳನ್ನು ಗೆಲ್ಲಬಹುದು ಎಂದು ನಾನು ಭಾವಿಸಿದ್ದೆ. ಆದರೆ ಈಗ 150 ಸ್ಥಾನಗಳನ್ನು ಪಡೆಯಬಹುದು ಎಂದು ನನಗನ್ನಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.


ಲೋಕಸಭಾ ಚುನಾವಣೆಗೆ ಮುನ್ನ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ಚುನಾವಣೆಗೆ ಸಂಬಂಧಿಸಿದಂತೆ ಪ್ರತಿ ರಾಜ್ಯಗಳಿಂದ ವರದಿ ಪಡೆಯುತ್ತಿದ್ದು, ನಾವು ಸುಧಾರಿಸಿದ್ದೇವೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದಲ್ಲಿ ನಮ್ಮ ಮೈತ್ರಿ ಸದೃಡವಾಗಿದ್ದು, ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ’ ಎಂದು ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದರು.


ಲೋಕಸಭೆ ಚುನಾವಣೆಗೆ ಅಮೇಥಿ ಅಥವಾ ರಾಯಬರೇಲಿಯಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ‘ಇದು ಬಿಜೆಪಿಯ ಪ್ರಶ್ನೆ. ಆದರೂ ಇದಕ್ಕೆ ನಾನು ಉತ್ತರಿಸುತ್ತೇನೆ. ನಮ್ಮ ಪಕ್ಷದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಸಿಇಸಿ ನಿರ್ಧಾರವೇ ಅಂತಿಮವಾಗಿದೆ’ ಎಂದರು.

Join Whatsapp
Exit mobile version