ಅಮೇಥಿ: ಲೋಕಸಭೆ ಚುನಾವಣೆಯಲ್ಲಿ 400 ಅಲ್ಲ 100 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದಿದ್ದಾರೆ.
ಅಮೇಥಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ 400 ಸೀಟುಗಳ ಕನಸು ಸಾಕಾರಗೊಳ್ಳುವುದಿಲ್ಲ ಎಂದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳನ್ನು ಗೆಲ್ಲುವುದಿಲ್ಲ ಮತ್ತು ಅದನ್ನು ಅಧಿಕಾರದಿಂದ ಹೊರಹೋಗುತ್ತದೆ ಎಂದು ಖರ್ಗೆ ಹೇಳಿದರು.
ಅಬ್ಕಿ ಬಾರ್ ಸತ್ತಾ ಸೆ ಬಾಹರ್ ಅಂದರೆ ಈ ಬಾರಿ ಅವರನ್ನು ಅಧಿಕಾರದಿಂದ ಗೆಳಗಿಳಿಸಲಾಗುವುದು ಎಂದರು. ಅಮೇಥಿ ಮತ್ತು ರಾಯ್ಬರೇಲಿಯಲ್ಲಿ ಕಾಂಗ್ರೆಸ್ ಹಲವು ಬಾರಿ ಚುನಾವಣೆಯಲ್ಲಿ ಗೆದಿದ್ದದ್ದರೂ ಜನರಲ್ಲಿ ದ್ವೇಷ ಬಿತ್ತಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.