ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ: ಎಸ್.ಎಲ್. ಭೈರಪ್ಪ

Prasthutha|

ಮೈಸೂರು: ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಭವಿಷ್ಯ ನುಡಿದಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ ಎಂದಿದ್ದಾರೆ.

- Advertisement -

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೈರಪ್ಪರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ಈ ವೇಳೆ ಪತ್ರಕರ್ತರ ಪ್ರಶ್ನೆಗಳಿಗೆ ಭೈರಪ್ಪ ಹೀಗೆ ಪ್ರತಿಕ್ರಿಯಿಸಿದ್ದಾರೆ.

ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಗ್ಯಾರಂಟಿಯಾಗಿ ಹೇಳಬಹುದು. ಆದರೆ, ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಕಷ್ಟ. ರಾಜ್ಯದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಆಗಿದೆ. ಉತ್ತರಪ್ರದೇಶದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಬಿಜೆಪಿ ಸರ್ಕಾರ ನಡೆದಿದ್ದರೆ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲಬಹುದಿತ್ತು. ಯೋಗಿ ಆದಿತ್ಯನಾಥ ಅವರಂತಹ ಮುಖ್ಯಮಂತ್ರಿಯನ್ನು ಕಂಡಿಲ್ಲ ಎಂದು ಭೈರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ಕರ್ನಾಟಕದಲ್ಲಿ ಸ್ವಲ್ಪ ಆ ಕಡೆಗೂ, ಈ ಕಡೆಗೂ ಎನ್ನುವಂತಹ ಸ್ಥಿತಿ ಇದೆ ಎಂದ ಅವರು, ಕರ್ನಾಟಕದಲ್ಲಿ ಮೋದಿ ಅಲೆ ಕಡಿಮೆ ಆಗಿದೆಯಾ?ಎಂಬ ಪ್ರಶ್ನೆಗೆ ‘ಗೊತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.

ಎಲ್ಲವನ್ನೂ ಉಚಿತವಾಗಿ ಕೊಡುತ್ತಿರುವುದರಿಂದ ಸರ್ಕಾರದಲ್ಲಿ ಹಣವೇ ಇಲ್ಲದಂತಾಗಿದೆ. ಹೀಗಾಗಿಯೇ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಕೇಂದ್ರದಿಂದ ಕೊಟ್ಟಿದ್ದನ್ನೆಲ್ಲಾ ಖರ್ಚು ಮಾಡಿ ವಿತ್ತ ಸಚಿವರನ್ನು ಬೈಯ್ಯುತ್ತಿದ್ದಾರೆ. ಭಾಷೆಯನ್ನು ಗೌರವಯುತವಾಗಿಯೂ ಬಳಸುತ್ತಿಲ್ಲ. ಟೀಕಿಸುತ್ತಿರುವ ಸಂಸ್ಕೃತಿ ಸರಿ ಇಲ್ಲ ಎಂದು ಕಾಂಗ್ರೆಸನ್ನು ದೂರಿದರು.



Join Whatsapp