ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನಿಗೆ ಜಾಮೀನು

Prasthutha|

ಮಂಡ್ಯ: 2022ರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ರವಿ ಎಂಬಾತನಿಗೆ ಮಂಡ್ಯ ಪಿಸಿಜೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ.

- Advertisement -


ಮಂಗಳವಾರ ಮಂಡ್ಯದ ಪಶ್ಚಿಮ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಆತನನ್ನು ಕೋರ್ಟ್ ಗೆ ಹಾಜರುಪಡಿಸಿ 2 ದಿನ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಇಂದು(ಮಾ.07) ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅದರಂತೆ ವಿಚಾರಣೆ ನಡೆಸಿದ ಮಂಡ್ಯ ನ್ಯಾಯಾಲಯ, ಇದೀಗ ಬಿಜೆಪಿ ಕಾರ್ಯಕರ್ತ ರವಿಗೆ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.


ಮಂಡ್ಯದ ಸಂಜಯ್ ವೃತ್ತದಲ್ಲಿ 22 ಡಿಸೆಂಬರ್ 2022 ರಂದು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಬಿಜೆಪಿ ಕಾರ್ಯಕರ್ತ ರವಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದ. ಇದನ್ನು ಕೇಳಿಸಿಕೊಂಡ ಅರವಿಂದ ಎಂಬ ಕಾರ್ಯಕರ್ತ ರವಿ ಬಾಯಿ ಮುಚ್ಚಿದ್ದ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.



Join Whatsapp