ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಹತ್ಯೆ

ಬಳ್ಳಾರಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನೋರ್ವನನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿ ರೇಡಿಯೋ ಪಾರ್ಕ್ ವೃತ್ತದಲ್ಲಿ ನಡೆದಿದೆ.


ಮಂಜುನಾಥ್ (35) ಕೊಲೆಯಾದ ಬಿಜೆಪಿ ಕಾರ್ಯಕರ್ತ.

- Advertisement -


ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಇಬ್ಬರು ಯುವಕರಿಂದ ದಾಳಿ ಮಾಡಿದ್ದು, ಕ್ಷಣ ಮಾತ್ರದಲ್ಲೇ ಮಂಜುನಾಥ್ ಸಾವನ್ನಪ್ಪಿದ್ದಾರೆ. ಆರೋಪಿಗಳು ಕೊಲೆಯಾದ ಯುವಕನ ಸ್ನೇಹಿತರು. ಹಳೇ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.


ಬಳ್ಳಾರಿಯ ಕೌಲಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.