Home ಟಾಪ್ ಸುದ್ದಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಹತ್ಯೆ

ಬಳ್ಳಾರಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನೋರ್ವನನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿ ರೇಡಿಯೋ ಪಾರ್ಕ್ ವೃತ್ತದಲ್ಲಿ ನಡೆದಿದೆ.


ಮಂಜುನಾಥ್ (35) ಕೊಲೆಯಾದ ಬಿಜೆಪಿ ಕಾರ್ಯಕರ್ತ.


ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಇಬ್ಬರು ಯುವಕರಿಂದ ದಾಳಿ ಮಾಡಿದ್ದು, ಕ್ಷಣ ಮಾತ್ರದಲ್ಲೇ ಮಂಜುನಾಥ್ ಸಾವನ್ನಪ್ಪಿದ್ದಾರೆ. ಆರೋಪಿಗಳು ಕೊಲೆಯಾದ ಯುವಕನ ಸ್ನೇಹಿತರು. ಹಳೇ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.


ಬಳ್ಳಾರಿಯ ಕೌಲಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version