ಮೈಸೂರು: ಮೈಸೂರು ಅಭಿವೃದ್ಧಿ ವಿಚಾರವಾಗಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನಡುವೆ ಚರ್ಚೆಗೆ ವೇದಿಕೆ ಸಿದ್ಧಗೊಂಡ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ನೂಗುನುಗ್ಗಲು ಉಂಟಾದ ಪರಿಣಾಮ ಪೊಲೀಸರು ಮಧ್ಯಪ್ರವೇಶಿಸಿ ಕೆಲವರನ್ನು ವಶಕ್ಕೆ ಪಡೆದಿದ್ದಾರೆ.
ಚರ್ಚೆ ವಿಷಯ ಭಾರಿ ಸುದ್ದಿಯ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ್ದು, ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಅಭಿವೃದ್ಧಿ ವಿಚಾರದಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಸಂಸದ ಪ್ರತಾಪ್ ಸಿಂಹ ಅವರಿಗೆ ಪಂಥಾಹ್ವಾನ ನೀಡಿರುವ ಹಿನ್ನೆಲೆಯಲ್ಲಿ, ಬಿಜೆಪಿ ಕಾರ್ಯಕರ್ತರು ಕೂಡ ಲಕ್ಷ್ಮಣ್ ಗೆ ಚರ್ಚೆ ಮಾಡಲು ಪಂಥಾಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಆಗಮಿಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.