Home ಟಾಪ್ ಸುದ್ದಿಗಳು ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ

ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ

ಕಲಬುರಗಿ: ಬಿಜೆಪಿ ಕಾರ್ಯಕರ್ತನೋರ್ವನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ಗ್ರಾಮದಲ್ಲಿ ನಡೆದಿದೆ.


ರಾಮು ರಾಠೋಡ್(45) ಮೃತಪಟ್ಟ ವ್ಯಕ್ತಿ.


ಬುಧವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದ ರಾಮು ನಿನ್ನೆ ರಾತ್ರಿ ಮನೆಗೆ ಬಂದಿರಲಿಲ್ಲ. ಇಂದು ಅವರ ಮೃತದೇಹ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ

Join Whatsapp
Exit mobile version