ಉಡುಪಿ: ಸ್ವಪಕ್ಷದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಿಜೆಪಿಗರು

Prasthutha|

ಉಡುಪಿ: ಬಿಜೆಪಿಗರಿಂದಲೇ ಸ್ವಪಕ್ಷದ ಕಾರ್ಯಕರ್ತನೊಬ್ಬ ಮಾರಣಾಂತಿಕ ಹಲ್ಲೆಗೊಳಗಾದ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮುದ್ದೂರು ಎಂಬಲ್ಲಿ ನಡೆದಿದೆ.

- Advertisement -

ನೆಂಚಾರು ನಿವಾಸಿ ಪ್ರಭಾಕರ ಪೂಜಾರಿ (51) ಹಲ್ಲೆಗೆ ಒಳಗಾದ ಬಿಜೆಪಿ ಕಾರ್ಯಕರ್ತ. ನೆಂಚಾರು ಹಾಲು ಡೈರಿಗೆ ಹಾಲು ನೀಡಲು ಬಂದಿದ್ದ ಪ್ರಭಾಕರ ಪೂಜಾರಿಯನ್ನು ಗುರುವಾರ ಬೆಳಗಿನ ಜಾವ 4 ಘಂಟೆಗೆ ಅಪಹರಿಸಿ ಗಂಭೀರ ಹಲ್ಲೆ ನಡೆಸಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಿಜೆಪಿ ಮುಖಂಡ ಪ್ರತಾಪ್ ಹೆಗ್ಡೆ ಅವರ ಕಚೇರಿಯಲ್ಲಿ ಸಂಜೆಯವರೆಗೂ ಕೂಡಿಹಾಕಿ ವಿದ್ಯುತ್ ತಂತಿಯಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಪ್ರತಾಪ್ ಹೆಗ್ಡೆ, ಹರೀಶ್, ದಿನೇಶ್ ಮತ್ತು ಗಣೇಶ್​ ಎಂಬವರು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.  ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಪ್ರಭಾಕರ ಪೂಜಾರಿಯನ್ನು ಅವರ ಪತ್ನಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

ಸ್ಥಳೀಯ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ನೆರವು ನೀಡಿದ್ದಾರೆ ಎಂದು ಆರೋಪಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಹಲ್ಲೆಯ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಭಾಕರ ಪೂಜಾರಿ ಪ್ರಕರಣ ದಾಖಲಿಸಿದ್ದಾರೆ.

Join Whatsapp