Home ಟಾಪ್ ಸುದ್ದಿಗಳು ಸಿಎಂಗೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಸಿಎಂಗೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಇಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.


ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಿಗದಿಯಾಗಿರುವ ಕೆಡಿಪಿ ಸಭೆಗೆ ಮುಖ್ಯಮಂತ್ರಿ ಬರುತ್ತಿದ್ದ ಕಾರಣ ಅವರಿಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನಿಸಿದರು.


ಜಿಲ್ಲಾ ಪಂಚಾಯಿತಿ ಸಭಾಂಗಣದ ಮುಂಭಾಗ ಜಮಾಯಿಸಿದ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Join Whatsapp
Exit mobile version