Home ಟಾಪ್ ಸುದ್ದಿಗಳು ಮಂಗಳೂರು | ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು | ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಸಂದರ್ಭ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.


ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ನೇತೃತ್ವದಲ್ಲಿ ಕಾರ್ಯಕರ್ತರು ನುಗ್ಗಿ ಬಂದಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಹತ್ತಿಸಿ ಕರೆದೊಯ್ದರು. ಕಾಂಗ್ರೆಸ್ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Join Whatsapp
Exit mobile version