ಸಚಿವರ ಸಮ್ಮುಖದಲ್ಲೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

Prasthutha|

ಹಾಸನ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಬಿಜೆಪಿ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಸಚಿವ ಗೋಪಾಲಯ್ಯ ಅವರ ಸಮ್ಮುಖದಲ್ಲೇ ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಹಾಸನ ಜಿಲ್ಲೆಯ ಅರಸೀಕೆರೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಚುನಾಯಿತ ಪ್ರತಿನಿಧಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಸಚಿವ ಬಿ. ಗೋಪಾಲಯ್ಯ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.


ಗೋಪಾಲಯ್ಯ ಮಾತನಾಡಿದ ಬಳಿಕ ಸಭೆಯಲ್ಲಿ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಮಾರಾಮಾರಿ ನಡೆದಿದೆ. ಸಚಿವರು ಎದ್ದುನಿಂತು ಶಾಂತಿ ಕಾಪಾಡುವಂತೆ ಮನವಿ ಮಾಡುತ್ತಿದ್ದರೂ ಕ್ಯಾರೇ ಎನ್ನದ ಬಿಜೆಪಿ ಕಾರ್ಯಕರ್ತರು ಮತ್ತಷ್ಟು ಘರ್ಷಣೆಯಲ್ಲಿ ತೊಡಗಿದರು.
ಹಾರನಹಳ್ಳಿ ಬಿಜೆಪಿ ಮುಖಂಡ ಮೋಹನ್ ಹಲ್ಲೆಯಿಂದ ಗಂಭೀರ ಗಾಯಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Join Whatsapp